Heavy rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇಂದು ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು, ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Divorce | ಡಿವೋರ್ಸ್‌ಗೆ ಕಾರಣಗಳೇನು? ವಿಚ್ಛೇದನದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳೇನು?
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು, ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಹಲವು ಸ್ಥಳಗಳಲ್ಲಿ &ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.