Heavy rain | ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್ ಘೋಷಿಸಿದೆ.
ಹೌದು, ಇಂದು ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಅಲ್ಲದೇ 24ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾ. ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.




