ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಪೂರ್ವ ಅರಬ್ಬಿ ಸಮುದ್ರ ತೀರದಲ್ಲಿ…

Heavy rain

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಪೂರ್ವ ಅರಬ್ಬಿ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದಿನಿಂದ ಕರ್ನಾಟಕದ ವಿವಿಧೆಡೆ ಬಹುತೇಕ ಮಳೆ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಅಕ್ಟೋಬರ್ 11 ರಿಂದ 16 ರವರೆಗೆ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ. ಪೂರ್ವ ಅರಬ್ಬಿ ಸಮುದ್ರ, ಕರ್ನಾಟಕ, ಗೋವಾ, ಕರಾವಳಿ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಲ್ಲಿ ಅಕ್ಟೋಬರ್​ 11 ರಿಂದ 14 ರವರೆಗೆ ಸಾಧಾರಣ ಮಳೆ ಮತ್ತು 15 ಮತ್ತು 16 ರಂದು ವ್ಯಾಪಕ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Devaragudda Karnika 2024 : ‘ಆಕಾಶದತ್ತ ಚಿಗರಿತಲೇ, ಬೇರು ಮುತ್ತಾಯಿತಲೇ ಪರಾಕ್’ ಎಂದ ಗೊರವಯ್ಯ ..!

Vijayaprabha Mobile App free

ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂ. ಗ್ರಾಮಾಂತರ, ಬೆಂ. ನಗರ, ಚಾಮರಾಜನಗರದಲ್ಲಿ ಜೋರು ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.