ರಾಜ್ಯದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಜುಲೈ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಾಗಾಗಿ ರಾಜ್ಯದ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ.
ಇನ್ನು, ಬಾದಾಮಿ, ಬಳ್ಳಾರಿ, ಬೆಂಗಳೂರು ನಗರ, ಬೀದರ್ ಚಿತ್ರದುರ್ಗ, ಧಾರವಾಡ, ಗದಗ, ಗೋಕರ್ಣ, ಹಂಪಿ, ಹೊನ್ನಾವರ, ಕಲಬುರ್ಗಿ, ಕಾರವಾರ, ಮಡಿಕೇರಿ, ಮಂಡ್ಯ, ಮಂಗಳೂರು, ಮೈಸೂರು, ರಾಯಚೂರು ಮತ್ತು ವಿಜಯಪುರ ಸುತ್ತಮುತ್ತ ಕೂಡ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ.