Heavy rain : ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್; ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ
ಇನ್ನು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ದಟ್ಟ ಮಂಜು ಇರಲಿದೆ.