Heavy rain : ರಾಜ್ಯದಲ್ಲಿ ಮುಂದಿನ 10 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಹೌದು, ಕರಾವಳಿ, ಮಲೆನಾಡು & ಸಿಲಿಕಾನ್ ಸಿಟಿ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಂಗಳೂರು,ಕೊಡಗು , ಚಿಕ್ಕಬಳ್ಳಾಪುರ, ಚಿತ್ರದುರ್ಗ,ಬಳ್ಳಾರಿ, ವಿಜಯನಗರ, ದಾವಣಗೆರೆ, ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದ್ದು, ಯೆಲ್ಲೋ ಅಲರ್ಟ್ ನೀಡಿದೆ.
ಇದನ್ನೂ ಓದಿ: ಖ್ಯಾತ ಜನಪದ ಕಲಾವಿದನ ಕಾರು ಭೀಕರ ಅಪಘಾತ
ಇನ್ನು, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.