Heavy rain: ರಾಜ್ಯದಲ್ಲಿ ಹಿಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ , ಕೊಡಗು, ಮೈಸೂರು, ಚಾಮರಾಜನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಇಂದು ನವರಾತ್ರಿ ಏಳನೇ ದಿನ ಕಾಳರಾತ್ರಿ ಸ್ವರೂಪ: ಪೂಜೆ ವಿಧಾನ, ಮಹತ್ವ
ಹೀಗಾಗಿ ಈ ಮೇಲಿನ ಜಿಲ್ಲೆಗಳ ನದಿ ಪಾತ್ರದ ಜನರು ಎಚ್ಚರವಹಿಸಲು ತಿಳಿಸಿದೆ. ಇನ್ನು, ಬೆಂಗಳೂರಿನಲ್ಲೂ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.