Heavy rain | ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಮುಂದಿನ 2 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




