Heavy rain : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದ್ದು, ಇಂದು ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಭಾರೀ ಮಳೆಗೆ ಬೆಂಗಳೂರು ತತ್ತರ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ತ
ಜೊತೆಗೆ ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅ.19 ರವರೆಗೆ ಭಾರಿ ಮಳೆ; ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ
ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದ್ದು, ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಭಾರಿ ಮಳೆಯಾಗುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು& ಪ್ರವಾಸಿಗರು ತೆರಳದಂತೆ ತಿಳಿಸಿದೆ. ಈ ಭಾಗದಲ್ಲಿ ಇಂದಿನಿಂದ ಮುಂದಿನ 3 ದಿನ (ಅ.19 ರವರೆಗೆ) ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆಯಿದೆ.