ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬರದ ನಾಡು ಉತ್ತರ ಕರ್ನಾಟಕ ಈಗ ಅಕ್ಷರಶಃ ಮಲೆನಾಡು ಆಗಿ ಬದಲಾಗಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಹಸಿರ ವಾತಾವರಣ ಕಾಣಿಸುತ್ತಿದೆ.
ಇನ್ನು, ಈ ಹವಾಮಾನ ವೈಪರಿತ್ಯದಿಂದಾಗಿ ಜನರಲ್ಲಿ ಜ್ವರ, ಶೀತ ಸಂಬಂಧಿತ ರೋಗ ಲಕ್ಷಣಗಳು ಕಾಣಿಸುತ್ತಿದೆ.
11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್:
ಇನ್ನು, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹೌದು, ಮಳೆ ಮತ್ತು ಪ್ರವಾಹ ಮುಂದುವರಿದಿದ್ದು, ಹಲವೆಡೆ ಭೂಕುಸಿತವೂ ಉಂಟಾಗಿದ್ದು, ಮುಂಬೈ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದ 11 ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರದ ಮುಂಬೈ, ರತ್ನಗಿರಿ, ಕೊಲ್ಹಾಪುರ, ರಾಯಗಡ, ಅಮರಾವತಿ, ಸತಾರಾ, ಸಿಂಧುದುರ್ಗ ಮತ್ತು ಥಾಣೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.