Heavy rain: ರಾಜ್ಯದಾತ್ಯಂತ ಭಾರೀ ಮಳೆ, ಈ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Heavy rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು &ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ತಾಸಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯ…

heavy rain

Heavy rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು &ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ತಾಸಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

rain vijayaprabha news
Heavy rain

ರಾಜ್ಯ ಕರಾವಳಿಯಲ್ಲಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮುಂದುವರಿಸಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಭಾರೀ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಅಲರ್ಟ್ ನೀಡಿರೋ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಜೋರು ಗಾಳಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಇದನ್ನು ಓದಿ: ಯಾವ ಇಲಾಖೆಗೆ ಎಷ್ಟು ಕೋಟಿ? ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Vijayaprabha Mobile App free

Heavy rain: ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ & ಉಡುಪಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡುಗು, ಚಿಕ್ಕಮಗಳೂರು, ಶಿವಮೊಗ್ಗ & ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆ (Heavy rain) ಯಾಗಲಿದೆ. ಹೀಗಾಗಿ ಚಿಕ್ಕಮಗಳೂರು & ಶಿವಮೊಗ್ಗದ ಕೆಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇನ್ನು ದ.ಕ., ಉಡುಪಿ ಜಿಲ್ಲೆಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವುದಾಗಿ ಜಿಲ್ಲಾಡಳಿತ ಹೇಳಿದೆ.

ಇದನ್ನು ಓದಿ: ಪೆಟ್ರೋಲ್, ಎಣ್ಣೆಗಿಂತ ಟೊಮೆಟೊ ಬೆಲೆ ಜಾಸ್ತಿ.. 250 ರೂ ತಲುಪಿದ ಟೊಮೆಟೊ; ಯಾವ ನಗರದಲ್ಲಿ ಬೆಲೆ ಹೇಗಿದೆ?

ಇನ್ನು, ಕಳಸ ತಾಲ್ಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಮಳೆಯಾಗುತ್ತಿರುವುದಲ್ಲದೆ, ಭದ್ರಾ ನದಿ ಹಾಗೂ ಅದರ ಉಪನದಿಗಳು ಮತ್ತು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದಲ್ಲದೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಕಾರಣ, ಎಲ್ಲಾ ಅಂಗನವಾಡಿ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ.

Heavy rain: ರಾಜ್ಯದಲ್ಲಿ ಭಾರೀ ಮಳೆಗೆ ಆರು ಮಂದಿ ಸಾವು

ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ ಸುರಿದ ಭಾರೀ ಮಳೆಯಿಂದ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕುಮಟಾದಲ್ಲಿ ಇಬ್ಬರು ನದಿ ನೀರಿಗೆ ಕೊಚ್ಚಿಕೊಂಡು ಹೋಗಿದ್ದಾರೆ. ಬಂಟ್ವಾಳದ ನಂದಾವರದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಪ್ರಾಣ ಬಿಟ್ಟಿದ್ದು, ಉಡುಪಿಯಲ್ಲಿ 47 ವರ್ಷದ ವ್ಯಕ್ತಿ ನದಿ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಬೇಲೂರಿನಲ್ಲಿಯೂ ವಿದ್ಯುತ್‌ ತಂತಿ ತುಳಿದು ವೃದ್ಧೆ ಮೃತಪಟ್ಟಿದ್ದಾರೆ. ಇದರೊಂದಿಗೆ ಮಳೆ ಅವಘಡಗಳಿಗೆ ಜುಲೈ ತಿಂಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದೆ.

ಇದನ್ನು ಓದಿ: ಸಂಚಲನ ಸೃಷ್ಟಿಸಿದ Jio, ಕೇವಲ ₹999ಕ್ಕೆ 4G ಫೋನ್‌; ಅನಿಯಮಿತ ಕರೆಗಳು, ಡೇಟಾ!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.