ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಈಗ ಚಿಕ್ಕಮಗಳೂರು ಜಿಲ್ಲೆ ಕೂಡ ಇದಕ್ಕೆ ಸೇರಿಕೊಂಡಿದೆ.
ಹೌದು, ಶೃಂಗೇರಿ, ಕಳಸ ತಾಲೂಕುಗಳ ಮತ್ತು ಬಾಳೂರು ಹೋಬಳಿಯ ಶಾಲೆಗಳಿಗೆ 2 ದಿನ ರಜೆ ಘೋಷಿಸಲಾಗಿದ್ದು, ಉಡುಪಿ ಜಿಲ್ಲೆಯ ಹೆಬ್ರಿ, ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕುಗಳ ಶಾಲಾ-ಕಾಲೇಜುಗಳಿಗೂ ಜುಲೈ 5 ಮತ್ತು 6ರಂದು ರಜೆ ನೀಡಲಾಗಿದೆ.
ಇನ್ನು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲೂ ಕೂಡ ಎಡಬಿಡದೆ ಭಾರಿ ಮಳೆ ಸುರಿಯುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.