Cold alert : ರಾಜ್ಯದಲ್ಲಿ ಮಳೆ, ವಿಪರೀತ ಚಳಿ (Severe cold) ಎಲ್ಲವೂ ಏಕಕಾಲಕ್ಕೆ ಕಂಡು ಬರುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಎಚ್ಚರವಾಗಿರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಉತ್ತರ ಕರ್ನಾಟಕದಲ್ಲಿ ಮುಂದಿನ ಮೂರು ದಿನ ವಿಪರೀತ ಚಳಿಯಿರಲಿದ್ದು, ಮುಂಜಾನೆ ಮತ್ತು ಮುಸ್ಸಂಜೆಯ ಸಮಯದಲ್ಲಿ ಮನೆಯಿಂದ ಹೊರಗೆ ಓಡಾಡದೇ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್ ನಲ್ಲಿ ಶೀತ ಅಲೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣ (Cold alert) ಮುಂದುವರಿಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ: Holiday | 87ನೇ ಕನ್ನಡ ಸಾಹಿತ್ಯ ಸಮ್ಮೇಳನ; ಇಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಗಾಳಿ ಸಹಿತ ಭಾರೀ ಮಳೆ!
ಇನ್ನು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಮಳೆ (heavy rain) ಯಾಗಲಿದ್ದು, ಮುಂದಿನ ಮೂರು ದಿನ ದಟ್ಟ ಮಂಜು ಮತ್ತು ಶೀತ ಗಾಳಿ ಇರಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Equity Mutual Fund | ಈಕ್ವಿಟಿ ಫಂಡ್ ಎಂದರೇನು? ಈಕ್ವಿಟಿ ಮ್ಯೂಚುವಲ್ ಫಂಡ್ ಗಳಲ್ಲಿ ಏಕೆ ಹೂಡಿಕೆ ಮಾಡಬೇಕು? ಯೋಜನಗಳೇನು
ರಾಜ್ಯದಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ. ಡಿ.21 ರಂದು ಚಾಮರಾಜನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.