Heavy rain: ಸೆ.12ರವರೆಗೆ ಮಳೆರಾಯನ ಆರ್ಭಟ ಮುಂದುವರಿಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮಳೆರಾಯ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮತ್ತೇ ಹೆಚ್ಚಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಯಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಂಭವವಿದೆ.
Sugar price: ಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆಯಲ್ಲಿ ಭಾರಿ ಏರಿಕೆ
Heavy rain: ಸಿಲಿಕಾನ್ ಸಿಟಿಯಲ್ಲಿ ವರುಣನಬ್ಬರ: ಬನ್ನೇರುಘಟ್ಟ ರಸ್ತೆ ಜಲಾವೃತ
ಮಳೆಯಿಲ್ಲದೆ ಕಂಗಾಲಾಗಿದ್ದ ಜನತೆಗೆ ವರುಣ ಕೊಂಚ ನಿರಾಳ ಉಂಟು ಮಾಡಿದ್ದು, ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು ತಡರಾತ್ರಿ ಸುರಿದ ಮಳೆಗೆ ಬೆಂಗಳೂರು-ಬನ್ನೇರುಘಟ್ಟ ರಸ್ತೆ ಜಲಾವೃತಗೊಂಡಿದೆ. ಕಾಳೇನ ಅಗ್ರಹಾರ ಸಮೀಪದ ಡೆಕಾತ್ಲಾನ್ ಬಳಿ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಜಲಾವೃತಗೊಂಡಿದ್ದು,ಪ್ರತಿ ಬಾರಿ ಮಳೆ ಸುರಿದಾಗಲೂ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜ್ಯಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!
ಇನ್ನು, ಭಾರತೀಯ ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಎಚ್ಚರಿಕೆಯನ್ನು ನೀಡಿದೆ. ಈ ಪ್ರಕಾರವೇ ರಾಜ್ಯದ ರಾಜಧಾನಿ, ಕಲಬುರಗಿಯಲ್ಲಿ ತೀವ್ರ ಮಳೆ ಉಂಟಾಗಿದೆ. ಇನ್ನು ಒಡಿಶಾ, ಆಂಧ್ರಪ್ರದೇಶ & ತೆಲಂಗಾಣದಂಲ್ಲಿಯೂ ಗಮನಾರ್ಹ ಮಳೆಯಾಗಲಿದೆ.ಇದಲ್ಲದೆ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಗೋವಾ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
Ration card: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಣೆ; ರೇಷನ್ ಕಾರ್ಡ್ ತಿದ್ದುಪಡಿ ಹೇಗೆ?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |