Heavy rain: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು,ಜುಲೈ13ರಿಂದ ಹೆಚ್ಚಿನ ಪ್ರಮಾಣ ಮಳೆ (Heavy rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರವೂ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ. ಸೋಮವಾರ ಭಾರೀ ಗಾಳಿ ಬೀಸುವ ಸಾಧ್ಯತೆ ಇದ್ದು, ಉಳಿದಂತೆ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಟ್ರಫ್ ಹಾಗೂ ವಾಯುದಿಕ್ಕಿನ ಬದಲಾವಣೆ ಹಿನ್ನಲೆ ಮುಂದಿನ ಮೂರು ದಿನಗಳು ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನು ಓದಿ: ಜುಲೈ 10 ರಿಂದ ನಿಮ್ಮ ಖಾತೆಗೆ ಹಣ; ಈ ಯೋಜನೆಯಡಿ 170 ರೂ., 340 ರೂ., 850 ರೂ. ಹೀಗೆ ಸಿಗುತ್ತೇ..ಅಕ್ಕಿ ಹಣ..
Heavy rain: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಕರಾವಳಿಯ ಎಲ್ಲಾ ಜಿಲ್ಲೆಗಳೂ ಸೇರಿದಂತೆ ದಕ್ಷಿಣ ಒಳನಾಡಿಗೆ ಭಾಗಕ್ಕೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇನ್ನೂ ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಬೆಂಗಳೂರು ಹಾಗೂ ಸುತ್ತಮುತ್ತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: ಯಾವ ಇಲಾಖೆಗೆ ಎಷ್ಟು ಕೋಟಿ? ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ
Heavy rain: ಸತತ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!!
ಇನ್ನು, ಹಿಮಾಚಲ ಪ್ರದೇಶದಲ್ಲಿ ಸತತ ಭಾರೀ ಮಳೆ (Heavy rain) ಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಜುಲೈ 8 ಮತ್ತು 9ರಂದು ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದೆ. ಅದೇ ಸಮಯದಲ್ಲಿ, ಜುಲೈ 10 ಕ್ಕೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದ್ದು, ಇಡೀ ರಾಜ್ಯದಲ್ಲಿ ಜುಲೈ 14ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |
ಇದನ್ನು ಓದಿ: ಪೆಟ್ರೋಲ್, ಎಣ್ಣೆಗಿಂತ ಟೊಮೆಟೊ ಬೆಲೆ ಜಾಸ್ತಿ.. 250 ರೂ ತಲುಪಿದ ಟೊಮೆಟೊ; ಯಾವ ನಗರದಲ್ಲಿ ಬೆಲೆ ಹೇಗಿದೆ?