ಎಚ್ಚರ: ರಾಜ್ಯದಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆ

ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,…

rain-vijayaprabha-news

ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬೆಂ.ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರಿನ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಇನ್ನು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡು ಇದ್ದು, ಇದೇ ವಾತಾವರಣ ಇಂದೂ ಇರಲಿದೆ.

Vijayaprabha Mobile App free

ಪ್ರಮುಖ ನಗರಗಳ ತಾಪಮಾನ :

ಬೆಂಗಳೂರು : 29-19, ಮಂಗಳೂರು: 29-24, ಶಿವಮೊಗ್ಗ: 28-21, ಬೆಳಗಾವಿ: 27-20, ಮೈಸೂರು: 29-20, ಮಂಡ್ಯ : 31-20 ಕೊಡಗು: 24-18, ರಾಮನಗರ: 31-20, ಚಾಮರಾಜನಗರ: 30-19, ಚಿಕ್ಕಬಳ್ಳಾಪುರ: 29-18, ಕೋಲಾರ: 30-20, ತುಮಕೂರು: 29-19, ಉಡುಪಿ: 29-24, ಕಾರವಾರ: 29-24, ಚಿಕ್ಕಮಗಳೂರು: 26-18, ದಾವಣಗೆರೆ: 28-21ಚಿತ್ರದುರ್ಗ: 29-20, ಹಾವೇರಿ: 28-29, ಬಳ್ಳಾರಿ: 32-22 ಗದಗ: 29-19, ಕೊಪ್ಪಳ: 31-22, ರಾಯಚೂರು: 32-23 ಡಿಗ್ರಿ ಸೆಲ್ಸಿಯಸ್ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.