ಬಿಸಿಲಿನ ಧಗೆಯ ನಡುವೆ ಇಂದೂ ಕೂಡ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇದನ್ನು ಓದಿ: BREAKING: ಮಾಜಿ ಸಚಿವರಿದ್ದ ಕಾರು ಭೀಕರ ಅಪಘಾತ, ಬಾಬುರಾವ್ ಚಿಂಚನಸೂರ್‌ಗೆ ಗಂಭೀರ ಗಾಯ!
ಹೌದು, ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಬಹುದಾಗಿದ್ದು, ಕರಾವಳಿ ಭಾಗದಲ್ಲಿ ಏಪ್ರಿಲ್ 15ರಿಂದ 18ರವರೆಗೆ ಭಾರೀ ಮಳೆಯ ನಿರೀಕ್ಷೆಯಿದ್ದು, ನಾಲ್ಕು ದಿನಗಳ ಕಾಲ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: VIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನ
ಇನ್ನು ಬಳ್ಳಾರಿ, ಗದಗ, ಹಾವೇರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನದಲ್ಲಿಯೂ ಭಾರೀ ಏರಿಕೆಯಾಗುತ್ತಿದ್ದು, 40 ಡಿಗ್ರಿ ಸೆಲ್ಶಿಯಸ್ ದಾಟಿದ್ದು, ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನು ಓದಿ: ಪಾನ್ ಕಾರ್ಡ್ ಹೊಂದಿರುವವರಿಗೆ ಬಿಗ್ ನ್ಯೂಸ್: ಪ್ಯಾನ್-ಆಧಾರ್ ಲಿಂಕ್ ಆಯ್ಕೆಯಲ್ಲಿ ಭಾರಿ ಬದಲಾವಣೆ!