ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹವಾಮಾನ ವರದಿ:
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಭಾಗ ಸೇರಿದಂತೆ ಹಲವು ಕಡೆ ಇಂದು ಕೂಡ ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ.
ಇನ್ನು, ಮುಂದಿನ 24 ಗಂಟೆಗಳಲ್ಲಿ ಭಾರೀ ಗಾಳಿ ಸಮೇತ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.