ಬೆಂಗಳೂರು: ರಾಜ್ಯದ ಕರಾವಳಿ & ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 7 ರವರೆಗೆ ಹವಾಮಾನ ವೈಪರೀತ್ಯದಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಕರಾವಳಿ ಪ್ರದೇಶಗಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ 64.5 ಮಿ.ಮೀ ಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವೂ ಅಧಿಕವಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹ ಮುಂದಿನ 2 ದಿನ ಅಧಿಕ ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.