ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 13 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಮೈಸೂರು, ಚಾಮರಾಜನಗರ, ಬೆಳಗಾವಿ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment