ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಇಂದಿನಿಂದ ಜುಲೈ 8ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಇದ್ದು, ಇಂದು ಮಳೆಯ ಪ್ರಮಾಣ ಏರಿಕೆಯಾಗುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 7 ಮತ್ತು 8ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನೀಡಿದೆ.
ಇನ್ನು, ಬೆಂಗಳೂರಿನಲ್ಲಿ ಕೂಡ ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಇಂದು ಸಂಜೆಯೂ ಮಳೆರಾಯ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.




