Heavy rains | ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ; ಯೆಲ್ಲೋ ಅಲರ್ಟ್ ಘೋಷಣೆ

Heavy rains : ರಾಜ್ಯಾದ್ಯಂತ ಮುಂದಿನ ಒಂದು ವಾರ ಮತ್ತೆ ಮಳೆ ಅಬ್ಬರಿಸಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ…

Heavy rains

Heavy rains : ರಾಜ್ಯಾದ್ಯಂತ ಮುಂದಿನ ಒಂದು ವಾರ ಮತ್ತೆ ಮಳೆ ಅಬ್ಬರಿಸಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ.

ಹೌದು, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ. ಹಾವೇರಿ, ಬೀದರ್. ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರಿನಲ್ಲೂ ಒಂದು ವಾರ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಹವಾಮಾನ ಇಲಾಖೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಳಗಾವಿ, ಬೀದರ್, ಕಲ್ಬುರ್ಗಿ, ವಿಜಯಪುರ, ಹಾಸನ, ಚಿಕ್ಕಮಗಳೂರು, ಕೋಲಾರ, ಗದಗ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Vijayaprabha Mobile App free

Heavy rains : ರಾಜ್ಯದಲ್ಲಿ ಭಾರೀ ಮಳೆಗೆ 101 ಮಂದಿ ಬಲಿ!

ಇನ್ನು, ರಾಜ್ಯದಲ್ಲಿ ಏ.1 ರಿಂದ ಆ.1ರವರೆಗೆ ಸುರಿದ ಮಳೆಯಿಂದ ವಿವಿಧ ಅವಘಡ ಸಂಭವಿಸಿ 101 ಜನ ಮೃತಪಟ್ಟಿದ್ದು, ಸಿಡಿಲಿನಿಂದ 49 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಹೌದು, ನಿನ್ನೆ ಸದನದಲ್ಲಿ ಮಾತನಾಡಿ, ಮಳೆ ಹಾನಿಗೆ 294 ಮನೆ ಸಂಪೂರ್ಣ ಹಾನಿ, 4880 ಮನೆಗೆ ಭಾಗಶಃ ಹಾನಿಯಾಗಿದೆ. ಮೃತಪಟ್ಟ 101 ಮಂದಿ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಭಾರೀ ಮಳೆಗೆ ಬೆಳಗಾವಿಯಲ್ಲಿ ಅತಿ ಹೆಚ್ಚು 13 ಜನ, ರಾಯಚೂರು 12, ವಿಜಯಪುರ ಹಾಗೂ ಹಾವೇರಿಯಲ್ಲಿ 9 ಜನ ಮೃತ ಪಟ್ಟಿದ್ದಾರೆ ಎಂದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.