ರಾಜ್ಯದಲ್ಲಿ ಮತ್ತೆ ಮಳೆ ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Heavy rains : ರಾಜ್ಯದಲ್ಲಿ ಮಳೆ ಆರ್ಭಟ ಇದೀಗ ಕೊಂಚ ಕಡಿಮೆಯಾಗಿದ್ದು, ಇದೀಗ ಕರ್ನಾಟಕದಲ್ಲಿ ಆಗಸ್ಟ್ 27ರಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಕರ್ನಾಟಕದಾದ್ಯಂತ ಆಗಸ್ಟ್…

Heavy rains

Heavy rains : ರಾಜ್ಯದಲ್ಲಿ ಮಳೆ ಆರ್ಭಟ ಇದೀಗ ಕೊಂಚ ಕಡಿಮೆಯಾಗಿದ್ದು, ಇದೀಗ ಕರ್ನಾಟಕದಲ್ಲಿ ಆಗಸ್ಟ್ 27ರಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ ಜೋರಾಗಲಿದ್ದು, ಆ.28 ರಿಂದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಶುರುವಾಗಲಿದ್ದು, ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ ಎನ್ನಲಾಗಿದೆ.

ಇನ್ನು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.