Heavy rain: ರಾಜ್ಯದೆಲ್ಲೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ; ಎಲ್ಲೆಲ್ಲಿ ಮಳೆ?

Heavy rain Heavy rain
Heavy rain

Heavy rain: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಕೆಂಗೇರಿಯಲ್ಲಿ ನಿನ್ನೆ ದಾಖಲೆಯ 141 ಮಿ.ಮೀ. ಮಳೆಯಾಗಿದೆ.

ಹೌದು, ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದು,  ಅತ್ತ ಹುಬ್ಬಳ್ಳಿ-ಧಾರವಾಡ ಹೈವೇ ಕುಸಿದಿದೆ. ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ ಜಿಲ್ಲೆಯಲ್ಲೂ ವಿಪರೀತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: T20 World Cup : ಚೊಚ್ಚಲ ಟಿ20 ವಿಶ್ವಕಪ್ ಎತ್ತಿಹಿಡಿದ ನ್ಯೂಜಿಲೆಂಡ್; ದ.ಆಫ್ರಿಕಾಕ್ಕೆ ಮತ್ತೊಮ್ಮೆ ನಿರಾಶೆ

Advertisement

Heavy rain: ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?

Heavy rain in Bangalore

  • ಮೆಜೆಸ್ಟಿಕ್, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರ,
  • ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್
  • ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ

ಇದನ್ನೂ ಓದಿ: Bhagyalakshmi yojana : ಫಲಾನುಭವಿಗಳಿಗೆ ಸಿಗುವ ಮೊತ್ತ ಎಷ್ಟು? ಭಾಗ್ಯಲಕ್ಷ್ಮೀ ಬಾಂಡ್ ಹಣ ಡ್ರಾ ಮಾಡಲು ನಿಯಮಗಳೇನು?

Heavy rain: ರಾಜ್ಯದೆಲ್ಲೆಡೆ ಭಾರೀ ಮಳೆ; ಹಲವೆಡೆ ಅವಾಂತರ

ಬೆಂಗಳೂರು ನಗರದಲ್ಲಿ ಬಿಟ್ಟುಬಿಡದೇ ಸುರಿದ ಮಳೆ ಜನರನ್ನು ಮತ್ತೆ ಹೈರಾಣಾಗುವಂತೆ ಮಾಡಿದ್ದು, ಬೆಂಗಳೂರು ಮಾತ್ರವಲ್ಲದೇ ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಭಾರೀ ಮಳೆಯಾಗಿದ್ದು ಜನ ಮಳೆಯಿಂದ ಪರದಾಡಿದ್ದಾರೆ.

ಹೌದು, ದಕ್ಷಿಣ ಒಳನಾಡು, ಮಲೆನಾಡು ಹಾಗು ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನು, ಚಿಕ್ಕಮಗಳೂರು, ರಾಮನಗರ,ಉಡುಪಿ, ಶಿವಮೊಗ್ಗ, ಜಿಲ್ಲೆಗಳಲ್ಲಿ 100 ಮಿಲಿಮೀಟರ್‌ಗೂ ಹೆಚ್ಚು ಮಳೆಯಾಗಿದ್ದು,ಮುಳ್ಳಯ್ಯನಗಿರಿ ಭಾಗದಲ್ಲಿ ಭಾರೀ ಮಳೆ ಸುರಿದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!