Heavy rain: ರಾಜ್ಯದ ಹವಾಮಾನದ ಬಗ್ಗೆ ಇಂದು ಹವಾಮಾನ ಇಲಾಖೆ ಹೊಸ ಅಪ್‌ಡೇಟ್ ನೀಡಿದ್ದು, ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ.. ಮತ್ತೆ 3 ತಿಂಗಳು ವಿಸ್ತರಣೆ!
ಹೌದು, ಮುಂಗಾರು ಮತ್ತೆ ಚುರುಕುಗೊಂಡಿದ್ದು, ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಚಂಡಮಾರುತದಿಂದ ಮುಂಗಾರು ದುರ್ಬಲಗೊಂಡಿತ್ತು. ಇದೀಗ ಚಂಡಮಾರುತ ದುರ್ಬಲವಾಗಿ, ಮುಂಗಾರು ಚುರುಕುಗೊಳ್ಳುತ್ತಿದೆ. ಹೀಗಾಗಿ, ಭಾನುವಾರ ರಾಜಧಾನಿ ಬೆಂಗಳೂರು, ಮಂಗಳೂರು, ಹೊನ್ನಾವರದಲ್ಲಿ ಮಳೆಯಾಗಿದೆ.
ಇನ್ನು, ರಾಜ್ಯದ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆ ಬರುವ ನಿರೀಕ್ಷೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಂಭವವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನು ಓದಿ: 19 ಜೂನ್ 2023 ಇಂದು ಸೂರ್ಯ ಮತ್ತು ಚಂದ್ರರ ಸಂಯೋಜನೆ, ಈ 5 ರಾಶಿಯವರು ಅದೃಷ್ಟವಂತರು..!
ಇದನ್ನು ಹೊರತುಪಡಿಸಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಉತ್ತರಕನ್ನಡ ಭಾಗದ ಕೆಲ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ 12 ಸೆಮೀ ಮಳೆಯಾದರೆ, ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 31.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
English Summary: Meteorological Department has said that there will be good rain with thunder in almost all the districts along the coast and southern interior of the state for the next 5 days.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |
ಇದನ್ನು ಓದಿ: ರೂ.200ಕ್ಕಿಂತ ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್; ಈ ರೇಷನ್ ಕಾರ್ಡ್ ಇದ್ದರೆ ರೂ.2,400 ರಿಯಾಯಿತಿ!