ಬಿಹಾರ: ಬಿಹಾರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರಿ ಮಳೆ, ಬಿರುಗಾಳಿಯಿಂದ 17 ಮಂದಿ ಮೃತಪಟ್ಟಿದ್ದಾರೆ.
ಹೌದು, ಈ ಸಂಬಂಧ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಹೌದು, ಬಿಹಾರದಲ್ಲಿ ವರುಣನ ಆರ್ಭಟದಿಂದ ಭಾಗಲ್‌ಪುರ ಜಿಲ್ಲೆಯಲ್ಲಿ (6) ಅತಿ ಹೆಚ್ಚು ಜನ ಸಾವಿಗೀಡಾಗಿದ್ದು, ವೈಶಾಲಿ (3), ಬಂಕಾ ಮತ್ತು ಖಗಾರಿಯಾ (2), ಮುಂಗೇರ್, ಕತೀಹಾರ್, ಮಾಧೇಪುರ ಮತ್ತು ಸಹಸ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು, ಇದು ಶನಿವಾರದಿಂದ ಈವರೆಗಿನ ಸಾವಿನ ಸಂಖ್ಯೆಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.