ಕರ್ನಾಟಕದಲ್ಲಿ ಭಾರೀ ಮಳೆ; ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎರಡು ದಿನ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಹೌದು, ಇಂದು ಮತ್ತು ನಾಳೆ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ…

rain vijayaprabha news

ರಾಜ್ಯದ ವಿವಿಧ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎರಡು ದಿನ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಹೌದು, ಇಂದು ಮತ್ತು ನಾಳೆ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿವಿಧ ನಗರಗಳ ತಾಪಮಾನ:

Vijayaprabha Mobile App free

ಬೆಂಗಳೂರು: 28-19, ಮಂಗಳೂರು: 27-24, ಶಿವಮೊಗ್ಗ: 27-21, ಬೆಳಗಾವಿ: 25-20, ಮೈಸೂರು: 28-20, ಮಂಡ್ಯ: 30-21, ಕೊಡಗು: 22-17, ರಾಮನಗರ: 29-20, ಹಾಸನ: 26-19, ಚಾಮರಾಜನಗರ: 28-20, ಚಿಕ್ಕಬಳ್ಳಾಪುರ: 28-19, ಕೋಲಾರ: 29-20, ತುಮಕೂರು: 28-20, ಉಡುಪಿ: 27-24, ಕಾರವಾರ: 28-25, ಚಿಕ್ಕಮಗಳೂರು: 24-18, ದಾವಣಗೆರೆ: 28-21, ಚಿತ್ರದುರ್ಗ: 28-21, ಹಾವೇರಿ: 28-21, ಬಳ್ಳಾರಿ: 32-22, ಗದಗ: 29-21, ಕೊಪ್ಪಳ: 31-22, ರಾಯಚೂರು: 32-23, ಯಾದಗಿರಿ: 32-23, ವಿಜಯಪುರ: 29-21
ಬೀದರ್: 28-21, ಕಲಬುರಗಿ: 31-22 ಬಾಗಲಕೋಟೆ: 30-22 ಡಿಗ್ರಿ ಸೆಲ್ಸಿಯಸ್ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.