ರಾಜ್ಯದಲ್ಲಿ ವರುಣನ ಆರ್ಭಟ ಕಡಿಮೆಯಾಗುತ್ತಿಲ್ಲ. ಇನ್ನೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹೌದು, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಇನ್ನು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲೂ ಇಂದು ಭಾರಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.