ರಾಜ್ಯದ ಕರಾವಳಿಯಲ್ಲಿ ಮಳೆ ತೀವ್ರತೆ ಕಡಿಮೆಯಾದ ಬೆನ್ನಲ್ಲೇ ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸತೊಡಗಿದೆ.
ಹೌದು, ಪಕ್ಕದ ಮಹಾರಾಷ್ಟ್ರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಇದರ ಪರಿಣಾಮ ರಾಜ್ಯದ ಕೃಷ್ಣಾ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಏರತೊಡಗಿದ್ದು, ಪ್ರವಾಹದ ಭೀತಿ ತಲೆದೋರಿದೆ.
ಇನ್ನು, ಆಲಮಟ್ಟಿ, ವಿಜಯನಗರ ಜಿಲ್ಲೆಯ ತುಂಗಭದ್ರಾ ಡ್ಯಾಂಗಳಿಂದ ನೀರು ಹೊರಬಿಟ್ಟಿದ್ದು, ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದು, ನದಿ ಪಾತ್ರದ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.