Heavy rains : ರಾಜ್ಯದಲ್ಲಿ ಇಂದಿನಿಂದ ಮತ್ತೆ 3 ದಿನ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೌದು, ಸೆಪ್ಟೆಂಬರ್ 16 ಮತ್ತು 17ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು, ಸೆ.18ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಡೆಹ್ರಾಡೂನ್‌ನಲ್ಲಿ ಭಾರೀ ಮಳೆಗೆ ಮೇಘಸ್ಫೋಟ
ಇನ್ನು, ಮುಂಜಾನೆ ಡೆಹ್ರಾಡೂನ್‌ನಲ್ಲಿ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಉಂಟಾಗಿ ಮನೆಗಳು ಮತ್ತು ರಸ್ತೆಗಳು ನಾಶವಾಗಿ, ಕಾರುಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿದ್ದರಿಂದ ಇಬ್ಬರು ನಾಪತ್ತೆಯಾಗಿದ್ದಾರೆ.
ಹೌದು, ತಡರಾತ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸಂತ್ರಸ್ತ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಭಾರೀ ಮಳೆ ಮತ್ತು ಮೇಘಸ್ಫೋಟದ ಹಿನ್ನೆಲೆಯಲ್ಲಿ ಡೆಹ್ರಾಡೂನ್‌ನಲ್ಲಿರುವ 1 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಶಾಲೆಗಳನ್ನು ಪ್ರಸ್ತುತ ಮುಚ್ಚಲಾಗಿದೆ.




