ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು-ನಾಲ್ಕು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರ ನೀಡಿದೆ. ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ಟ್ರಫ್ ಇರುವುದರಿಂದ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದಿದೆ.
ಇದನ್ನು ಓದಿ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ಚಿನ್ನದ ದರದಲ್ಲಿ ಭಾರೀ ಏರಿಕೆ!
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ವಿವಿಧ ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ನೀಡಿದೆ.
ಇದನ್ನು ಓದಿ: PPF Account: ಸರ್ಕಾರದ ಈ ಯೋಜನೆ ಲಕ್ಷಾಧಿಪತಿಗಳನ್ನಾಗಿಸುತ್ತದೆ; ಹೂಡಿಕೆ ಕಡಿಮೆ, ಬಡ್ಡಿಯೊಂದಿಗೆ ಕೋಟಿಗೂ ಹೆಚ್ಚು ಲಾಭ..!
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಭಾರೀ ಏರಿಕೆ:
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಜಾಸ್ತಿಯಾಗುತ್ತಿದ್ದು ಬೆಂಗಳೂರಿನಲ್ಲಿ ಈ ವರ್ಷದಲ್ಲಿ ಮೊದಲ ಬಾರಿಗೆ 34.5ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ದಕ್ಷಿಣ, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ನಿಗದಿಗಿಂತ 3 ಡಿ.ಸೆಲ್ಶಿಯಸ್‌ನಷ್ಟು ತಾಪಮಾನ ಏರಿಕೆಯಾಗಿದೆ.
ಇದನ್ನು ಓದಿ: ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?
ಇನ್ನು, ಏಪ್ರಿಲ್ ಮೊದಲ ವಾರದಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಕಲಬುರಗಿ, ಮೈಸೂರು, ರಾಯಚೂರು, ಮಂಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗರಿಷ್ಠ ಉಷ್ಣಾಂಶ 35 ಡಿ.ಸೆ ದಾಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ