ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು, ಏಪ್ರಿಲ್ 2 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಹಲವು ಜಿಲ್ಲೆಗಳಲ್ಲಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ವಿಜಯನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.