Heavy rain : ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಸೈಕ್ಲೋನ್ ಪ್ರಭಾವದಿಂದಾಗಿ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ 3 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರು ಕೊಡಗು, ಕೋಲಾರ, ರಾಮನಗರ, ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದ್ದು ಇಂದಿನಿಂದ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
Heavy rain : ಜಡಿ ಮಳೆಗೆ ಬೆಂಗಳೂರಿನಲ್ಲಿ ಅಲ್ಲೋಲ-ಕಲ್ಲೋಲ
ಭಾರೀ ಮಳೆಗೆ ಬೆಂಗಳೂರಿನಲ್ಲಿ ಅಕ್ಷರಶಃ ಜಲ ಪ್ರಳಯ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶ, ಅಪಾರ್ಟ್‌ಮೆಂಟ್‌ಗಳು, ಬೇಸ್‌ಮೆಂಟ್ ಪ್ರದೇಶಗಳಿಗೆ ನೀರು ನುಗ್ಗಿದೆ.
ಇನ್ನು, ಭಾರೀ ಟ್ರಾಫಿಕ್ ಜಾಮ್.. ಭಾರೀ ಚಳಿ ಜನರನ್ನು ಕಂಗೆಡಿಸಿದೆ. ಚಿಕ್ಕಬಾಣಾವರದ ಮಾರುತಿನಗರದಲ್ಲಿ 40ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. ಮಹಾದೇವಪುರದ ಸಾಯಿ ಲೇಔಟ್‌ನಲ್ಲಿ ಮನೆಗಳ ನೆಲಮಹಡಿಗೆ ನೀರು ನುಗ್ಗಿದ್ದರಿಂದ ಅಲ್ಲಿನ ಜನರು ಹೋಟೆಲ್‌ಗಳಲ್ಲಿ ಉಳಿದುಕೊಂಡಿದ್ದಾರೆ.