ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ 11ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಜುಲೈ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉ.ಕನ್ನಡ, ಉಡುಪಿ, ದ.ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಜೊತೆಗೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬಾದಾಮಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್, ಚಿತ್ರದುರ್ಗ, ಧಾರವಾಡ, ಗದಗ, ಗೋಕರ್ಣ, ಹಂಪಿ, ಹಾಸನ, ಹೊನ್ನಾವರ, ಕಲಬುರ್ಗಿ, ಮೈಸೂರು, ರಾಯಚೂರಿನಲ್ಲಿ ಇಂದಿನಿಂದ ಜುಲೈ 11ರವರೆಗೆ ಮಳೆಯಾಗಲಿದ್ದು, ಆಗುಂಬೆ, ಕಾರವಾರ, ಮಡಿಕೇರಿ, ಮಂಡ್ಯ, ಮಂಗಳೂರು, ವಿಜಯಪುರದಲ್ಲಿ ಇಂದಿನಿಂದ ಜುಲೈ 13ರವರೆಗೆ ಮಳೆಯಾಗಲಿದೆ ಎನ್ನಲಾಗಿದೆ.