ಬೆಂಗಳೂರು: ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗಲಿದ್ದು, ಈ ಹಿನ್ನೆಲೆ ರಾಜ್ಯಾದ್ಯಂತ ನಾಳೆಯಿಂದ ಜುಲೈ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 30ರವರೆಗೆ ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.