ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆ ಸುರಿದಿದ್ದು, 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇನ್ನು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇಂದು ಕೂಡ ದಕ್ಷಿಣ ಕನ್ನಡ,ಉತ್ತರ ಕನ್ನಡ,ಉಡುಪಿಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಸಾರಡ್ಕ ಎಂಬಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದಿದ್ದು, ಓಡಾಟ ನಿಷೇಧಿಸಲಾಗಿದೆ. ಇನ್ನು ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದಲ್ಲದೆ ಮಂಗಳೂರಿನ ಉಳ್ಳಾಲದ ಕಡಲ ತೀರದ ಮನೆಗಳು ಅಪಾಯದಲ್ಲಿವೆ.
ಇನ್ನು, ಬೀದರ್, ಹಾಸನ, ಶಿವಮೊಗ್ಗ, ವಿಜಯಪುರ, ಯಾದಗಿರಿ, ಬೆಳಗಾವಿ, ಮತ್ತು ಕಲಬುರ್ಗಿ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.