Heavy rain : ಉತ್ತರ ಭಾರತದಲ್ಲಿನ ಶೀತ ಮಾರುತಗಳು ಕರ್ನಾಟಕದ ಹವಾಗುಣದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಡಿಸೆಂಬರ್ 20ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ
ಹೌದು, ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.