ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಕೊಂಚ ದುರ್ಬಲವಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಚುರುಕುಗೊಂಡಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಇಂದು, ನಾಳೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದೆ.
ಇನ್ನು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಹಾಸನ, ಕೋಲಾರ, ಮೈಸೂರು, ಮಂಡ್ಯಗಳಲ್ಲಿ ಮಳೆಯಾಗಲಿದ್ದು, ಕಲಬುರ್ಗಿ ಹಾಗೂ ಬೀದರ್‌ನ ಕೆಲವೆಡೆ ಮಳೆಯಾಗಬಹುದೆಂದು ಹವಾಮಾನ ಇಲಾಖೆ ತಿಳಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment