ರಾಜ್ಯದಲ್ಲಿ ಭಾರಿ ಮಳೆ: ದಾವಣಗೆರೆ ಸೇರಿದಂತೆ 22 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಣೆ

rain-vijayaprabha-news rain-vijayaprabha-news

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ, ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು, ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆಯಾಗಲಿದ್ದು, ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು, ಧಾರವಾಡ, ಹಾವೇರಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದ್ದು ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ವಿವಿಧ ನಗರಗಳ ತಾಪಮಾನ:

Advertisement

ಬೆಂಗಳೂರು: 27-21, ದಾವಣಗೆರೆ: 28-22, ಮಂಗಳೂರು: 28-24 ಶಿವಮೊಗ್ಗ: 28-21, ಬೆಳಗಾವಿ: 28-21, ಮೈಸೂರು: 27-21, ಚಾಮರಾಜನಗರ: 28-21, ಚಿಕ್ಕಬಳ್ಳಾಪುರ:27-20, ಕೋಲಾರ: 28-22, ತುಮಕೂರು: 27-21, ಮಂಡ್ಯ: 28-22, ಕೊಡಗು: 24-28 , ರಾಮನಗರ: 28-24,, ಹಾಸನ: 26-19, ಉಡುಪಿ: 28-24, ಕಾರವಾರ: 29-24, ಚಿಕ್ಕಮಗಳೂರು: 22-19, ಚಿತ್ರದುರ್ಗ: 28-21, ಹಾವೇರಿ: 29-22, ಬಳ್ಳಾರಿ: 30-23, ಗದಗ: 29-22 , ಕೊಪ್ಪಳ: 30-23 , ರಾಯಚೂರು: 31-23 , ಯಾದಗಿರಿ: 31-24 ,ವಿಜಯಪುರ: 31-23 , ಬೀದರ್:29-22 , ಕಲಬುರಗಿ: 31-23 , ಬಾಗಲಕೋಟೆ:31-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement