Heavy rains : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಹೌದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಮನೆಯಿಂದ ಹೊರಹೋಗುವ ಮುನ್ನ ಜಾಗರೂಕರಾಗಿರಿ.




