ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಬೆಂಗಳೂರು, ಹುಬ್ಬಳ್ಳಿ, ಕಲುಬುರಗಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿದ್ದು, ನೆರೆಯಿಂದ ಜನರು ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಈಗಿರುವಾಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 21 ಹಾಗೂ ಅಕ್ಟೊಬರ್ 22 ರಂದು ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ತುಮಕೂರು ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.
ಇನ್ನು ಕರಾವಳಿ ಭಾಗದ ಜಿಲ್ಲೆಯಲ್ಲಿ ಅಕ್ಟೊಬರ್ 23 ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಈ ಭಾಗದ ಜಿಲ್ಲೆಗಳಲ್ಲಿ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ; ಹಲವು ಮನೆಗಳು ಜಲಾವೃತ
ಇದನ್ನು ಓದಿ: ಮದುವೆಯಾಗಿ ಮೂರೇ ತಿಂಗಳಿಗೆ ತನ್ನ ಮೂರನೇ ಗಂಡನನ್ನು ಮನೆಯಿಂದ ಹೊರ ಹಾಕಿದ ಖ್ಯಾತ ನಟಿ..?