ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಳೆಯ ಸಾಧ್ಯತೆಯೂ ದಟ್ಟವಾಗಿದ್ದು,ರಾಜ್ಯದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: ಕೊನೆಗೂ ಇಳಿಕೆ ಕಂಡ ಚಿನ್ನದ ಬೆಲೆ, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಬೆಳ್ಳಿ; ರಾಜ್ಯದಲ್ಲಿ 10 ಗ್ರಾಂ ಚಿನ್ನದ ದರ ಎಷ್ಟು?
ಹೌದು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಇದನ್ನು ಓದಿ: ಪಿಎಂ ಕಿಸಾನ್ ಯೋಜನೆಗೆ ರೈತರು ನೊಂದಾಯಿಸುವುದು ಹೇಗೆ? ಸರಿಯಾಗಿದೆ ಎಂದು ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದಲ್ಲಿ ದಾಖಲೆಯ ಗರಿಷ್ಠ ಉಷ್ಣಾಂಶ:
ರಾಜ್ಯದಲ್ಲಿ ಈ ವರ್ಷದ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಶಿಯಸ್ ಕಲಬುರಗಿಯಲ್ಲಿ ದಾಖಲಾಗಿದ್ದು, ಇದರೊಂದಿಗೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು ತಾಪಮಾನ ಏರಿಕೆಯಾಗುತ್ತಿದೆ.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ದಾಟಿದರೂ ವಾಡಿಕೆ ಗರಿಷ್ಠ ಉಷ್ಣಾಂಶಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಮಾತ್ರ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಜಾಸ್ತಿಯಾಗಬಹುದು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. 2016ರಲ್ಲಿ ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ಇದನ್ನು ಓದಿ: ಕೇಂದ್ರದ ಮಹತ್ವದ ನಿರ್ಧಾರ: ಮೇ 1ರಿಂದ GST ಹೊಸ ನಿಯಮ, ಇನ್ಮುಂದೆ ಈ ಕೆಲಸ ಮಾಡಲೇಬೇಕು!
ಇನ್ನು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ವಿವಿದೆಡೆ ಇನ್ನೂ ೨ ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನು ಓದಿ: Google Pay ನಲ್ಲಿ ಸಿಬಿಲ್ ಸ್ಕೋರ್ ಉಚಿತವಾಗಿ ಪರಿಶೀಲಿಸಬಹುದು; ಸ್ಟೆಪ್ ಬೈ ಸ್ಟೆಪ್ ಪ್ರೊಸಸ್ ಇಲ್ಲಿದೆ ನೋಡಿ