Heavy rains | ರಾಜ್ಯದ ಬಹುತೇಕ ಕಡೆ ಮತ್ತೆ ಮಳೆ ಶುರುವಾಗಿದ್ದು, ಇಂದು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೌದು, ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾತ್ರಿ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೆಳಗಾವಿ, ಬೀದರ್, ಕೋಲಾರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಹಾಗೂ ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಧಾರಾಕಾರ ಮಳೆಯಾಗಿದ್ದು, ಇನ್ನೂ 2 ದಿನ ಮಳೆ ಆಗಲಿದ್ದು, 10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇನ್ನು, ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸೆಪ್ಟೆಂಬರ್ 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.




