ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ 4 ವರ್ಷದೊಳಗಿನ ಮಕ್ಕಳು ಕ್ರ್ಯಾಶ್ ಹೆಲ್ಮೆಟ್ ಧರಿಸುವುದನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕಡ್ಡಾಯಗೊಳಿಸಿದೆ.
ಹೌದು, ಇನ್ಮುಂದೆ 4 ವರ್ಷದೊಳಗಿನ ಮಕ್ಕಳು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ದ್ವಿಚಕ್ರ ವಾಹನದ ವೇಗವನ್ನು ಗಂಟೆಗೆ 40 kmph ಗೆ ನಿರ್ಬಂಧ ವಿಧಿಸಲಾಗಿದ್ದು, ಈ ನಿಯಮವು 15 ಫೆಬ್ರವರಿ 2023 ರಿಂದ ಜಾರಿಗೆ ಬರಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿಳಿಸಿದೆ.
ಇನ್ನು, ವಾಹನ ಸವಾರರ ಸುರಕ್ಷತೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.