Truecaller ಅಪ್ಲಿಕೇಶನ್ ಮೊಬೈಲ್ ಕರೆಗಳ ಮಾಹಿತಿ ಗುರುತಿಸುವ ಸೇವೆ ಒದಗಿಸುತ್ತಿರುವುದು ಗೊತ್ತೇ ಇದೆ. ಆದರೆ, ಈಗ ಭಾರತದಲ್ಲಿ ಸರ್ಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಫೋನ್ ನಂಬರ್‌ಗಳನ್ನು ತನ್ನ ಆಪ್‌ಗೆ ಸೇರ್ಪಡೆ ಮಾಡಿ, ‘ಡಿಜಿಟಲ್ ಸರ್ಕಾರಿ ಡೈರೆಕ್ಟರಿ’ ಬಿಡುಗಡೆ ಮಾಡಿದೆ.
ಇನ್ನು, Truecaller ನ ಈ ಸೇವೆಯ ನೆರವಿನಿಂದ ಅಧಿಕಾರಿಗಳನ್ನು ಅಧಿಕೃತವಾಗಿ ಸಂಪರ್ಕಿಸಬಹುದು. ಸಹಾಯವಾಣಿ, ಪ್ರಮುಖ ಸಂಸ್ಥೆಗಳು, ರಾಯಭಾರ ಕಚೇರಿಗಳು ಸೇರಿ 23 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಮುಖ ಇಲಾಖೆಗಳ ಮಾಹಿತಿ ‘ಡಿಜಿಟಲ್ ಸರ್ಕಾರಿ ಡೈರೆಕ್ಟರಿಯಲ್ಲಿ ಸಿಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.