ಸೀಜ್ ಆದ ವಾಹನಗಳನ್ನು ಬಿಡಿಸಿಕೊಳ್ಳಲು ಹೈಕೋರ್ಟ್ ಅನುಮತಿ; 2 ವೀಲರ್ ಗೆ-₹500, 4 ವೀಲರ್ ಗೆ ₹1,000 ದಂಡ

ಬೆಂಗಳೂರು: ಲಾಕ್ ಡೌನ್ ವೇಳೆ ನಿಯಮ ಮೀರಿ ರಸ್ತೆಗಿಳಿದು ಸೀಜ್ ಆಗಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡಿಸಿಕೊಳ್ಳಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಸೀಜ್ ಆದ ವಾಹನಗಳ ರಿಲೀಸ್ ಗೆ ಅನುಮತಿ ಕೋರಿ ಹೈಕೋರ್ಟ್…

New traffic rules vijayaprabha

ಬೆಂಗಳೂರು: ಲಾಕ್ ಡೌನ್ ವೇಳೆ ನಿಯಮ ಮೀರಿ ರಸ್ತೆಗಿಳಿದು ಸೀಜ್ ಆಗಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡಿಸಿಕೊಳ್ಳಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಸೀಜ್ ಆದ ವಾಹನಗಳ ರಿಲೀಸ್ ಗೆ ಅನುಮತಿ ಕೋರಿ ಹೈಕೋರ್ಟ್ ಗೆ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದಂಡ ಕಟ್ಟಿ ವಾಹನಗಳನ್ನು ಬಿಡಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದ್ದು, ವಾಹನಗಳ ಮಾಲೀಕರು ಪೊಲೀಸ್ ಠಾಣೆಗಳಲ್ಲಿ ದಂಡ ಕಟ್ಟಿ ತಮ್ಮ ವಾಹನಗಳನ್ನು ಬಿಡಿಸಿಕೊಳ್ಳಬಹುದಾಗಿದೆ.

2 ವೀಲರ್ ಗೆ-₹500, 4 ವೀಲರ್ ಗೆ ₹1,000 ದಂಡ:

Vijayaprabha Mobile App free

ಇನ್ನು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಿಳಿದಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ಬಿಡುಗಡೆ ಮಾಡಿಸಿಕೊಳ್ಳಲು ಮಾಲೀಕರು ದಂಡ ಪಾವತಿಸಬೇಕಿದ್ದು, ಕರ್ನಾಟಕ ಸರ್ಕಾರಕ್ಕೆ ಒಟ್ಟು 9.04 ಕೋಟಿ ರೂ ಲಾಭವಾಗಲಿದೆ ಎಂದು ಹೇಳಲಾಗಿದೆ.

ರಾಜ್ಯ ಹೈಕೋರ್ಟ್ ದಂಡದ ಮೊತ್ತವನ್ನು ನಿಗದಿಪಡಿಸಿದ್ದು, ದ್ವಿಚಕ್ರ ವಾಹನಗಳಿಗೆ-₹500, ನಾಲ್ಕು ಚಕ್ರದ ವಾಹನಗಳಿಗೆ-₹1,000 & ಇತರೆ ವಾಹನಗಳಿಗೆ-₹2,000/- ರೂಗಳ ದಂಡ ಪಾವತಿಸಿ ವಾಹನಗಳನ್ನು ಬಿಡುಗಡೆ ಮಾಡಿಸಿಕೊಳ್ಳಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.