ಬೆಂಗಳೂರು: 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದ್ದು, ರಾಜ್ಯದಲ್ಲಿ ಮಾರ್ಚ್ 27 ರಿಂದ ಪರೀಕ್ಷೆ ಆರಂಭವಾಗಲಿದೆ.
ಹೌದು, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದ್ದು, 10 ದಿನಗಳ ಬಳಿಕ ಪರೀಕ್ಷೆ ನಡೆಸಬೇಕು, ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ. ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment