ತಡರಾತ್ರಿ ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್; ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೌದು, ಪ್ರಕರಣದ ಕುರಿತು ವಿಚಾರಣೆ ನಡೆಸಿದ ಏಕಸದಸ್ಯ ಪೀಠ,…

Ganeshotsavam at Eidgah Maidan

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹೌದು, ಪ್ರಕರಣದ ಕುರಿತು ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಮೈದಾನ ಪಾಲಿಕೆಗೆ ಸೇರಿದ್ದು ಎಂಬುದು ನಿರ್ವಿವಾದ ಎಂದು ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿದೆ.

ಈದ್ಗಾ ಮೈದಾನದಲ್ಲಿ ಸಂಭ್ರಮ: ಕೇಂದ್ರ ಸಚಿವ ಜೋಶಿ ಭೇಟಿ

Vijayaprabha Mobile App free

ಇನ್ನು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು, ಇಂದು ಅದ್ದೂರಿಯಾಗಿ ಗಣೇಶೋತ್ಸವ ನಡೆಯಲಿರುವ ಕಾರಣ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸಚಿವ ಪ್ರಹ್ಲಾದ್‌ ಜೋಶಿ ಅವರು ಮಾತನಾಡಿ, ‘ಕೆಲವರು ಅನಗತ್ಯವಾಗಿ ವಿವಾದ ಮಾಡಲು ಯತ್ನಿಸಿದ್ದರು. ಹೈಕೋರ್ಟ್‌ ಆದೇಶವನ್ನು ನಾವೆಲ್ಲ ಸ್ವಾಗತಿಸುತ್ತೇವೆ’ ಎಂದಿದ್ದಾರೆ. ತೀರ್ಪು ಬೆನ್ನಲ್ಲೇ ಈದ್ಗಾ ಮೈದಾನದಲ್ಲಿ ಹಿಂದೂ ಸಂಘಟನೆಗಳ ಸದಸ್ಯರು ಸಂಭ್ರಮಾಚರಣೆ ನಡೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.