ಕೆಎಂಎಫ್ ನ 467 ಹುದ್ದೆಗಳ ಭರ್ತಿಗಾಗಿ ಪ್ರಕಟಿಸಿದ್ದ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೌದು, ಈ ಕುರಿತು ಡಿ.ಆರ್.ರವೀಂದ್ರ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಲಿಖಿತ ಪರೀಕ್ಷೆಯಲ್ಲಿ ಕನ್ನಡವೂ ಒಂದು ಭಾಷೆಯನ್ನಾಗಿ ಇಡಲಾಗಿದೆ. ಅಲ್ಲದೆ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಗುಜರಾತ್ ಮೂಲದ ರೂರಲ್ ಡೆವಲಪ್ಮೆಂಟ್ ಸಂಸ್ಥೆಗೆ ವಹಿಸಲಾಗಿದೆ. ಸಂಸ್ಥೆಯು ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಸಂದರ್ಶಕರಿಗೆ ನೀಡಿದೆ. ಇದು ಕಾನೂನುಬಾಹಿರವೆಂದು ಆರೋಪಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.