ಬೆಂಗಳೂರು: ಚಾಲನಾ ಪರವಾನಿಗೆ (ಡಿಎಲ್) ಇಲ್ಲದ ಡ್ರೈವರ್ ವಿಮೆ ಹೊಂದಿರುವ ವಾಹನವನ್ನು ಚಲಾಯಿಸಿ ಅಪಘಾತ ನಡೆಸಿದರೆ ವಿಮಾ ಸಂಸ್ಥೆಯು ಸಂತ್ರಸ್ತರಿಗೆ ಪರಿಹಾರ ನೀಡಿ ನಂತರ ಅಪಘಾತಕ್ಕೆ ಕಾರಣವಾದ ವಾಹನದ ಮಾಲೀಕನಿಂದ ಪರಿಹಾರ ಮೊತ್ತ ವಸೂಲಿ ಮಾಡಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ಪೀಠ, ಅಪಘಾತಕ್ಕೆ ಕಾರಣವಾದ ವಾಹನದ ಮಾಲೀಕನಿಂದ ಪರಿಹಾರ ಮೊತ್ತ ವಸೂಲಿ ಮಾಡಿಕೊಳ್ಳಬಹುದು ಎಂದು ಈ ಆದೇಶ ನೀಡಿದ್ದು, ಮೃತ ವ್ಯಕ್ತಿಯ ವಯಸ್ಸು ಮತ್ತು ವರಮಾನ ಪರಿಗಣಿಸಿ ಪರಿಹಾರ ಮೊತ್ತವನ್ನು 13 ಲಕ್ಷದಿಂದ 24.48 ಲಕ್ಷ ರೂ. ಗೆ ಪೀಠ ಹೆಚ್ಚಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.